Call : + 91 824 2495464
Mobile : 74838 17602
Email Id : [email protected]

ರಾಜ್ಯಮಟ್ಟದ 5ನೇ ಹಾಗೂ 7ನೇ ರ್‍ಯಾಂಕ್‌ನೊಂದಿಗೆ ಶೇಕಡಾ 100 ಫಲಿತಾಂಶ

ಮಾರ್ಚ್ 2020ರಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ನಗರದ ಶಾರದಾ ಪ.ಪೂ. ಕಾಲೇಜು 100 ಶೇಕಡಾ ಫಲಿತಾಂಶವನ್ನು ದಾಖಲಿಸಿದೆ. ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ವಿeನ ವಿಭಾಗದಿಂದ ಒಟ್ಟು 352 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 189 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್), 152 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 11 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು 100 ಶೇಕಡಾ ಫಲಿತಾಂಶ ಬಂದಿರುತ್ತದೆ.

ಅದಿತಿ ಪ್ರಭು ಕೆ. ಪಿ.
ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅದಿತಿ ಪ್ರಭು ಕೆ. ಪಿ. ಅವರು 600 ಅಂಕಗಳಲ್ಲಿ 590 ಅಂಕ ಪಡೆದು ರಾಜ್ಯಕ್ಕೆ 7ನೇ ಸ್ಥಾನ
ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪೃಥ್ವಿ ಎನ್. ಹೆಬ್ಬಾರ್ ಅವರು 600ರಲ್ಲಿ 593 ಅಂಕವನ್ನು ಪಡೆದು ರಾಜ್ಯಕ್ಕೆ 5ನೇ ಸ್ಥಾನ

 

 

 

 

 

 

 

 

 

 

 

 

 

ಹಾಗೆಯೇ ವಾಣಿಜ್ಯ ವಿಭಾಗದಲ್ಲಿ ಒಟ್ಟು 158 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 80 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, 73 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲೂ, 03 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲೂ, 02 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿ ಒಟ್ಟು 100 ಶೇಕಡಾ ಫಲಿತಾಂಶ ದಾಖಲಾಗಿರುತ್ತದೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅದಿತಿ ಪ್ರಭು ಕೆ. ಪಿ. ಅವರು 600 ಅಂಕಗಳಲ್ಲಿ 590 ಅಂಕ ಪಡೆದು ರಾಜ್ಯಕ್ಕೆ 7ನೇ ಸ್ಥಾನ ಗಳಿಸಿದರೆ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪೃಥ್ವಿ ಎನ್. ಹೆಬ್ಬಾರ್ ಅವರು 600ರಲ್ಲಿ 593 ಅಂಕವನ್ನು ಪಡೆದು ರಾಜ್ಯಕ್ಕೆ ೫ನೇ ಸ್ಥಾನವನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ| ಎಂ.ಬಿ.ಪುರಾಣಿಕ್, ಹಾಗೂ ಆಡಳಿತ ಮಂಡಳಿಯ ಟ್ರಸ್ಟಿಗಳು, ಪ್ರಾಂಶುಪಾಲರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ.